ನವದೆಹಲಿ, ಮೇ 27(DaijiworldNews/MS): ಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿ. 1889ರ ನ.14ರಂದು ಜನಿಸಿದ್ದ ನೆಹರು ಅವರು 1964ರ ಮೇ 27ರಂದು ಮರಣ ಹೊಂದಿದ್ದರು.
ದೇಶದ ಪ್ರಧಾನಮಂತ್ರಿಯಾಗಿದ್ದ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿದ್ದರು. ಇನ್ನು ನೆಹರೂ ಪುಣ್ಯತಿಥಿ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.
ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು
ಪುಣ್ಯತಿಥಿ ಪ್ರಯುಕ್ತ ಕಾಂಗ್ರೆಸ್ ಇಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕಚೇರಿಯಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ನೂತನ ಸಚಿವರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.