ನವದೆಹಲಿ, ಮೇ 27 (DaijiworldNews/KH): ಮೂರು ವರ್ಷಗಳ ಅವಧಿಗೆ ಸಾಮಾನ್ಯ ಪಾಸ್ಪೋರ್ಟ್ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಕೋರ್ಟ್ ಅನುಮತಿ ನೀಡಿದೆ.
ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ ರಾಜತಾಂತ್ರಿಕ ಪಾಸ್ಪೋರ್ಟ್ ಸೌಲಭ್ಯ ಕೂಡ ರದ್ದಾಗಿತ್ತು. ಹೀಗಾಗಿ 10 ವರ್ಷಗಳ ಕಾಲ ಸಾಮಾನ್ಯ ಪಾಸ್ಪೋರ್ಟ್ ಪಡೆಯಲು ಅನುಮತಿ ನೀಡುವಂತೆ ರಾಹುಲ್ ಗಾಂಧಿ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣ ವಿಚಾರಣೆ ನಡೆಸುತ್ತಿರುವ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದರು.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ಹಣ ವರ್ಗಾವಣೆ ಮತ್ತು ಹಣ ದುರುಪಯೋಗವನ್ನು ಒಳಗೊಂಡ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಯಾಗಿರುವುದ್ದರಿಂದ ,ರಾಹುಲ್ ಗಾಂಧಿಗೆ ಸಾಮಾನ್ಯ ಪಾಸ್ಪೋರ್ಟ್ ಪಡೆಯಲು ನ್ಯಾಯಾಲಯವು ಅನುಮತಿ ಪಡೆಯುವುದು ಅಗತ್ಯವಾಗಿತ್ತು.ರಾಹುಲ್ ಗಾಂಧಿ ಅವರ ಮೇಲೆ ಗಂಭೀರ ಆರೋಪವಿದೆ. ರಾಹುಲ್ ಗಾಂಧಿಗೆ ಸಾಮಾನ್ಯವಾಗಿ ಎಲ್ಲರಿಗೂ ನೀಡುವ 10 ವರ್ಷದ ಪಾಸ್ಪೋರ್ಟ್ ಬದಲು 1 ವರ್ಷದ ಪಾಸ್ಪೋರ್ಟ್ ನೀಡಬೇಕು ಹಾಗೂ ಅದರ ಪ್ರತಿ ವರ್ಷ ನವೀಕರಣ ಮಾಡಬೇಕು’ ಎಂದು ಸುಬ್ರಮಣಿಯನ್ ಸ್ವಾಮಿ ಕೋರಿದ್ದರು.