ನವದೆಹಲಿ, ಮೇ 27 (DaijiworldNews/KH):ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗ ಎಂಟನೇ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಲ್ಲಿದ್ದು,ರಾಜ್ಯದ ಎಲ್ಲಾ 6 ಮುಖ್ಯಮಂತ್ರಿಗಳು ಇಂದು ಸಭೆಯಲ್ಲಿ ಗೈರು ಹಾಜರಾಗಿದ್ದಾರೆ.
ದೆಹಲಿಯ ಪ್ರಗತಿ ಮೈದಾನದಲ್ಲಿರುವ ಹೊಸ ಕನ್ವೆನ್ಷನ್ ಸೆಂಟರ್ನಲ್ಲಿ ‘ವಿಕ್ಷಿತ್ ಭಾರತ್ 2047 ಟೀಮ್ ಇಂಡಿಯಾದ ಪಾತ್ರ’ ವಿಷಯದ ಕುರಿತು ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮೋದಿ ಚರ್ಚಿಸಲಿದ್ದಾರೆ.
ನೀತಿ (NITI) ಆಯೋಗ ಉನ್ನತ ಸಂಸ್ಥೆಯಾದ ಆಡಳಿತ ಮಂಡಳಿಯು ಎಲ್ಲಾ ಮುಖ್ಯಮಂತ್ರಿಗಳನ್ನು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಮತ್ತು ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಇನ್ನೂ ಈ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ನಿರಾಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಮತ್ತು ಅಸ್ಸಾಂ ಮತ್ತು ಜಾರ್ಖಂಡ್ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ಸಭೆಗೆ ಹಾಜರಾಗದಿರಲು ನಿರ್ಧರಿಸಿದ ಮುಖ್ಯಮಂತ್ರಿಗಳು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಕೌಂಟರ್ ಭಗವಂತ್ ಮಾನ್, ಇಬ್ಬರೂ ಆಮ್ ಆದ್ಮಿ ಪಕ್ಷದ ನಾಯಕರು ಸೇರಿದ್ದಾರೆ. ಬಂಗಾಳ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ಮತ್ತು ಜನತಾ ದಳ-ಯುನೈಟೆಡ್ ನಾಯಕ ನಿತೀಶ್ ಕುಮಾರ್, ತೆಲಂಗಾಣ ಸಿಎಂ ಮತ್ತು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ ಚಂದ್ರಶೇಖರ ರಾವ್, ತಮಿಳುನಾಡು ಸಿಎಂ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂಕೆ ಸ್ಟಾಲಿನ್, ರಾಜಸ್ಥಾನ ಸಿಎಂ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮತ್ತು ಕೇರಳ ಸಿಎಂ ಮತ್ತು ಸಿಪಿಐ (ಎಂ) ನಾಯಕ ಪಿಣರಾಯಿ ವಿಜಯನ್ ಗೈರಾಜರಾಗಿದ್ದಾರೆ.