ನವದೆಹಲಿ, ಮೇ 28 (DaijiworldNews/KH): ಹಲವರು ವರ್ಷಗಳಿಂದ ಸೆರೆಮನೆಯಲ್ಲಿದ್ದು ಬಿಡುಗಡೆಯಾದ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವಿವಾರ ಭೇಟಿ ಮಾಡಿದರು.
ಶುಕ್ರವಾರ ಸುಪ್ರೀಂ ಕೋರ್ಟ್ನಿಂದ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ನೀಡಿಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದ ಜೈನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಶುಕ್ರವಾರ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.
ಸತ್ಯೇಂದ್ರ ಜೈನ್ ಅವರು ತಿಹಾರ್ ಜೈಲಿನ ವಾಶ್ ರೂಂನಲ್ಲಿ ಕುಸಿದು ಬಿದ್ದಿದರಿಂದ ಅವರನ್ನು ಆರಂಭದಲ್ಲಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಅವರನ್ನು ಎಲ್ಎನ್ಜೆಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.. ಇದೀಗ ದೆಹಲಿಯ ಲೋಕನಾಯಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ತಿಂಗಳಲ್ಲಿ ಜೈಲುಪಾಲಾದ ತ್ಯೇಂದ್ರ ಜೈನ್ ಅವರು ಮೊದಲ ಬಾರಿಗೆ ಕೇಜ್ರಿವಾಲ್ ಅವರು ಭೇಟಿ ಮಾಡಿ ಮಾತನಾಡಿದ್ದಾರೆ. ಅನಂತರ ಅರವಿಂದ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ಅವರನ್ನು ಭೇಟಿ ಮಾಡಿದ ನಂತರ ಟ್ವೀಟ್ ಮಾಡಿದ ‘ಧೈರ್ಯಶಾಲಿ ವ್ಯಕ್ತಿಯನ್ನು ಭೇಟಿಯಾದೆ.. ದಿ ಹೀರೊ” ಎಂದು ಬರೆದುಕೊಂಡಿದ್ದಾರೆ.