ಬೆಂಗಳೂರು, ಮೇ 30 (DaijiworldNews/HR): ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೇ ಪ್ರಣಾಳಿಕೆಯಲ್ಲಿ ಹೇಳಿದ್ದು, ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಹಿಂದೆ ಅಧಿಕಾರದಲ್ಲಿದ್ದ ಸರಕಾರ ಶಾಲಾ ಪಠ್ಯ ಪುಸ್ತಕಗಳಲ್ಲಿಸೇರಿಸಿದ ವಿಷಯಗಳನ್ನು ತೆಗೆದುಹಾಕಬೇಕೆಂದು ಬರಹಗಾರರು, ಸಾಹಿತಿಗಳು ರಾಜ್ಯ ಸರಕಾರಕ್ಕೆ ಮಾಡಿದ ಮನವಿಗೆ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಮಕ್ಕಳ ಮನಸಿಗೆ ಕಲ್ಮಶ ತುಂಬುವ ಯಾವುದೇ ಪಠ್ಯ ಇದ್ದರೂ ಅದನ್ನ ಬದಲಾವಣೆ ಮಾಡುತ್ತೇವೆ. ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದಿದ್ದಾರೆ.