ಮೈಸೂರು,ಮಾ.30(AZM): ನಾಮಪತ್ರ ಸಲ್ಲಿಸುವ ವೇಳೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಮೈಸೂರು ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಸುವ ವೇಳೆ ಪತ್ನಿ ಅರ್ಪಿತಾ ಹೆಸರಿನಲ್ಲಿ ವಿಜಯನಗರ 4ನೇ ಹಂತದಲ್ಲಿ ಸಂಖ್ಯೆ 12194/ಡಿ ನಿವೇಶನ ಇದೆ ಎಂದು ದಾಖಲು ಮಾಡಿದ್ದಾರೆ. ಆದರೆ ಅದು ಅವರ ಹೆಸರಿನಲ್ಲಿ ಇಲ್ಲ. ಬಿ.ಶಿವರಾಮಯ್ಯ ಎಂಬುವವರ ಹೆಸರಿನಲ್ಲಿದೆ. ಹಾಗಾಗಿ ಸುಳ್ಳು ಮಾಹಿತಿ ನೀಡಿರುವ ಪ್ರತಾಪ್ ಸಿಂಹ ವಿರುದ್ಧ ಕ್ರಮ ಜರುಗಿಸಬೇಕು ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ
ಪತ್ನಿ ಹೆಸರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಇನ್ನೂ ಅನೇಕ ಆಸ್ತಿಗಳಿವೆ ಎನ್ನುವ ಅನುಮಾನವಿದ್ದು, ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ, ಈ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚಿಸಿ ಸೋಮವಾರ ಹೈಕೋರ್ಟ್ನಲ್ಲಿ ಕೇಸ್ ದಾಖಲಿಸಲಾಗುವುದು ಎಂದು ಪ್ರಭುಸ್ವಾಮಿ ತಿಳಿಸಿದ್ದಾರೆ.