ಬೆಂಗಳೂರು,ಮಾ30(AZM):ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರನ್ನು ಹೊರಗಿಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿರುವ ಸ್ಟಾರ್ ಪ್ರಚಾರಕರು:
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಡಾ. ಜಯಮಾಲಾ, ಉಮಾಶ್ರೀ, ಸಿ.ಎಂ.ಇಬ್ರಾಹಿಂ, ಗುಲಾಮ್ ನಬಿ ಆಜಾದ್, ಪೃಥ್ವಿರಾಜ್ ಚವಾಣ್, ಸಚಿನ್ ಪೈಲಟ್, ಸಲೀಮ್ ಅಹಮದ್, ಆರ್.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಆರ್.ಬಿ.ತಿಮ್ಮಾಪುರ, ಪಿ.ಟಿ. ಪರಮೇಶ್ವರ ನಾಯ್ಕ್, ಕೆ. ರೆಹಮಾನ್ ಖಾನ್, ಕೆ.ಎಚ್. ಮುನಿಯಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಎಚ್.ಎಂ. ರೇವಣ್ಣ, ಮೋಟಮ್ಮ, ಮುಖ್ಯಮಂತ್ರಿ ಚಂದ್ರು, ರೋಷನ್ ಬೇಗ್, ಡಾ. ಎಚ್.ಸಿ. ಮಹದೇವಪ್ಪ, ಡಾ. ಎಲ್. ಹನುಮಂತಯ್ಯ, ವಿ.ಆರ್. ಸುದರ್ಶನ್ ಮತ್ತು ಐವಾನ್ ಡಿಸೋಜಾ ಅವರು ಸ್ಥಾನ ಪಡೆದುಕೊಂಡಿದ್ದಾರೆ.