ಬಾಲಸೋರ್ ಜೂ 03 (DaijiworldNews/MS): ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿವಳಿ ರೈಲುಗಳ ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ.
ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಮದ್ಯೆ ಅಪಘಾತ ಸಂಭವಿಸಿತ್ತು. ಈ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರಧಾನ ಮಂತ್ರಿ ಕಚೇರಿ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಮೊದಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಬಳಿಕ ನಂತರ ಸಂತ್ರಸ್ತರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಗೋವಾದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟಿಸಬೇಕಿತ್ತು. ಆದರೆ ಒಡಿಶಾದಲ್ಲಿ ನಡೆದ ದುರಂತ ಘಟನೆ ಹಿನ್ನಲೆಯಲ್ಲಿ ವಂದೇ ಭಾರತ್ ಲೋಕಾರ್ಪಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಒಡಿಶಾದ ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಹಿರಿಯ ರೈಲ್ವೇ ಅಧಿಕಾರಿಗಳ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಸಭೆ ಬಳಿಕ ಒಡಿಶಾಗೆ ತೆರಳಿ ಘಟನಾ ಸ್ಥಳ ಪರಿಶೀಲಿಸಿ ಬಳಿಕ ಕಟಕ್ನ ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.