ಬೆಂಗಳೂರು, ಜೂ 04 (DaijiworldNews/MS): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ವಿತರಿಸಲು ಶನಿವಾರ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ 3000 ರೂ.ವರೆಗೆ ನೆರವು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಆದರೆ ತಪ್ಪು ಮಾಹಿತಿ ನೀಡಿ, ಆರ್ಥಿಕ ನೆರವು ಪಡೆಯುವವರಿಗೆ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. 2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಡೆದವರಿಗೆ, ಪದವಿ/ಡಿಪ್ಲೋಮಾ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇದ್ದರೆ ಈ ಸೌಲಭ್ಯ ಅನ್ವಯವಾಗುತ್ತದೆ. ಉದ್ಯೋಗ ದೊರೆತ ನಂತರ ಸರ್ಕಾರ ಫಲಾನುಭವಿ ಮಾಹಿತಿ ನೀಡಬೇಕಾಗುತ್ತದೆ.
ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಭತ್ಯೆ ಸಿಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುತ್ತಿರುವವಿಗೂ ಯುವ ನಿಧಿ ಯೋಜನೆಯಡಿ ಭತ್ಯೆ ಸಿಗುವುದಿಲ್ಲ