ನವದೆಹಲಿ, ಜೂ 04 (DaijiworldNews/MS): ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಕೆಯಾಗಿದೆ.
ಬಾಲಸೋರ್ ನಲ್ಲಿ ನಡೆದ ತ್ರಿವಳಿ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288 ಏರಿಕೆಯಾಗಿದ್ದು 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಸುಪ್ರೀಂ ಕೋರ್ಟ್ ವಕೀಲ ವಿಶಾಲ್ ತಿವಾರಿ ಎಂಬವರು ಅರ್ಜಿ ಸಲ್ಲಿಸಿದ್ದು ರೈಲ್ವೆ ದುರಂತ ಸಂಬಂಧ ತನಿಖೆಗೆ ತಜ್ಞರ ಸಮಿತಿ ರಚಿಸುವಂತೆ ಕೋರಿ ಹಾಗೂ ರೈಲು ಪ್ರಯಾಣವನ್ನು ಶೇ.100ರಷ್ಟು ಸುರಕ್ಷಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಮಾರ್ಗದಲ್ಲಿ ರಕ್ಷಾಕವಚ ವ್ಯವಸ್ಥೆಯು ಸಕ್ರಿಯವಾಗಿಲ್ಲ. ಈ ವ್ಯವಸ್ಥೆ ಸಕ್ರಿಯವಾಗಿದ್ದರೆ, ಅಪಘಾತವನ್ನು ತಪ್ಪಿಸಬಹುದಿತ್ತು. ಇದುವರೆಗೆ ಕೆಲವೇ ಮಾರ್ಗಗಳಲ್ಲಿ ಅಳವಡಿಸಲಾಗಿದೆ. ಈ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಆದಷ್ಟು ಬೇಗ ಎಲ್ಲ ಮಾರ್ಗಗಳಲ್ಲಿ ಸರಿಪಡಿಸಿ ಪ್ರಯಾಣಿಕರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.