ಕೇರಳ,ಮಾ31(AZM): ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದಲೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರು ಸ್ಪರ್ಧಿಸುವುದು ಖಚಿತವಾಗಿದೆ.
ಪ್ರಸ್ತುತ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿ ಲೋಕ ಸಭಾ ಕ್ಷೇತ್ರದ ಸಂಸದರಾಗಿದ್ದು, ಈ ಬಾರಿಯೂ ಸಹ ರಾಹುಲ್ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ಅಲ್ಲದೆ . ಮತ್ತು ದಕ್ಷಿಣ ಭಾರತದ ಕೇರಳ ರಾಜ್ಯದಿಂದಲೂ ಸಹ ರಾಹುಲ್ ಗಾಂಧಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಖಚಿತಪಡಿಸಿದೆ.
ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದವು. ಈ ವಿಚಾರವಾಗಿ ಬಹಳಷ್ಟು ಯೋಚಿಸಿ ಚರ್ಚಿಸಿದ ಬಳಿಕ ನಮ್ಮ ಪಕ್ಷದ ಅಧ್ಯಕ್ಷರು ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಈ ವಯನಾಡ್ ಕ್ಷೇತ್ರವು ತನ್ನ ಗಡಿಭಾಗವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿದೆ. ಹಾಗಾಗಿ ಈ ಎರಡು ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಸ್ಪರ್ಧೆ ಬಲ ತುಂಬಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ.