ಬೆಂಗಳೂರು, ಜೂ 07 (DaijiworldNews/HR): ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದರು.
ಇನ್ನು ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ ಎಂದು ಹೇಳಿದ್ದಾರೆ.