ನವದೆಹಲಿ, ಜೂ 07 (DaijiworldNews/HR): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸ್ಥಿತಿಯನ್ನು ನೆನೆದು ಕಣ್ಣೀರಿಟ್ಟ ಘಟನೆ ಬುಧವಾರ ನಡೆದಿದೆ.
ಶಿಕ್ಷಣ ಸಂಸ್ಥೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಿಸೋಡಿಯಾ ಅವರು ಮಾಡಿದ ಕಾರ್ಯಗಳನ್ನು ನೆನೆದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾವುಕರಾಗಿದ್ದಾರೆ.
ಇನ್ನು ಬಿಜೆಪಿಯವರು ಸುಳ್ಳು ಕೇಸು ಹಾಕಿ ಜೈಲಿಗೆ ಹಾಕಿದ್ದಾರೆ. ಮನೀಶ್ ಜೀ ಉತ್ತಮ ಶಾಲೆಗಳನ್ನು ಕಟ್ಟದಿದ್ದರೆ ಅವರನ್ನು ಜೈಲಿಗೆ ಹಾಕುತ್ತಿರಲಿಲ್ಲ. ಅವರು ಶಿಕ್ಷಣ ಕ್ರಾಂತಿಯನ್ನು ಕೊನೆಗೊಳಿಸಲು ಬಯಸುತ್ತಾರೆ ಆದರೆ ನಾವು ಶಿಕ್ಷಣ ಕ್ರಾಂತಿಯನ್ನು ಕೊನೆಗೊಳಿಸಲು ಬಿಡುವುದಿಲ್ಲ ಎಂದರು.
ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಮಾರ್ಚ್ 9 ರಂದು ವಿಚಾರಣೆಯ ಬಳಿಕ ಇಡಿ ಇದೇ ಪ್ರಕರಣದಲ್ಲಿ ಬಂಧಿಸಿತ್ತು.