ಬೆಂಗಳೂರು, ಜೂ 08 (DaijiworldNews/MS): ಬೆಂಗಳೂರಿನ ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ 6 ಗಂಟೆಗೆ ನಿಗದಿಯಾಗಿದ್ದ ಬಿಜೆಪಿ ಕೋರ್ ಕಮಿಟಿ ಸಭೆಯನ್ನು ಕಾರಣಾಂತರಗಳಿಂದ ಧಿಡೀರ್ ರದ್ದು ಮಾಡಲಾಗಿದೆ.
ಇಂದು ಕೋರ್ ಕಮಿಟ್ ಸಭೆ ನಡೆಯುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದ್ದರು.
ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯದ ಪ್ರಭಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ಆದರೆ ಇದೀಗ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಏಕಾಏಕಿ ರದ್ದಾಗಿದ್ದು ಕುತೂಹಲ ಮೂಡಿಸಿದೆ.