ಬೆಂಗಳೂರು,ಜೂ 08 (DaijiworldNews/MS): ಪೊಲೀಸರು ಕುಂಕುಮ, ವಿಭೂತಿ ಇಡಬಾರದು ಅಂತ ನಾನು ಯಾವ ಸಭೆಯಲ್ಲೂ ಸೂಚನೆ ಕೊಟ್ಟಿಲ್ಲ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವದಂತಿ ಹರಡುವುದು ಸರಿಯಲ್ಲ, ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ತನ್ನದೇ ಆದ ಇಲಾಖಾ ನಿಯಮ ಇವೆ. ಆ ನಿಯಮಗಳ ವ್ಯಾಪ್ತಿಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಬಹುದು. ಇದರಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದು ಸರಿಯಲ್ಲ, ನಾನು ಯಾವುದೇ ಸೂಚನೆ ನೀಡಿಲ್ಲ ಎಂದು ಹೇಳಿದ್ದಾರೆ.
ಕೋಮುವಾದ ಒಂದು ಸಮುದಾಯಕ್ಕೆ ಸೇರಿದಲ್ಲ. ಎಲ್ಲಾ ಸಮುದಾಯದಲ್ಲೂ ಇದೆ. ಮಂಗಳೂರು ಭಾಗದಲ್ಲಿ ವಿಂಗ್ ಬೇಡಿಕೆ ಬಂದಿದೆ.ಅದಕ್ಕಾಗಿ ಅಲ್ಲಿ ಮಾಡಲಾಗುತ್ತಿದೆ. ಹೀಗಾಗಿ ಬೇರೆ ಕಡೆ ಇದನ್ನ ಮಾಡೋ ಅಗತ್ಯತೆ ಬರೋದಿಲ್ಲ ಎಂದಿದ್ದಾರೆ.ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ.ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದರು.