ಬೆಂಗಳೂರು, ಜೂ 09 (DaijiworldNews/MS): ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ ಗಡುವು ನೀಡಿದ್ದಾರೆ.
ಇದೇ ಜೂನ್ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ಡೆಡ್ ಲೈನ್ ನೀಡಿದ್ದಾರೆ. ಆಸ್ತಿ ವಿವರ ಸಲ್ಲಿಸುವ ಆದೇಶ ನೀಡಿ 15 ದಿನ ಕಳೆದರೂ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ. ಈ ಹಿನ್ನಲೆಯಲ್ಲಿ ಲೋಕಾಯುಕ್ತರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ.
ಜನಪ್ರತಿನಿಧಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ ನೀಡಲೇ ಬೇಕಾಗಿದ್ದು ಕಾನೂನು ಪಾಲಿಸದಿದ್ದರೆ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಲೋಕಾಯುಕ್ತರು ನೀಡಿದ್ದಾರೆ.