ನವದೆಹಲಿ, ಜೂ 12 (DaijiworldNews/MS): ದೇಶದಲ್ಲಿ ಕೋವಿಡ್ ಲಸಿಕೆ ಪಡೆದ ಕೋಟ್ಯಾಂತರ ಜನರು, ರಾಜಕಾರಣಿಗಳು , ಪತ್ರಕರ್ತರ ಖಾಸಗಿ ಮಾಹಿತಿ ಸೋರಿಕೆಯಾಗಿ ಎಂದು ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಮೊಬೈಲ್ ನಂಬರ್, ಆಧಾರ್ ಸಂಖ್ಯೆಗಳು, ಪಾಸ್ಪೋರ್ಟ್ ವಿವರ, ಮತದಾರರ ಗುರುತಿನ ಚೀಟಿಗಳು ಮತ್ತು ಕುಟುಂಬ ಸದಸ್ಯರ ವಿವರಗಳು ಸೇರಿದಂತೆ ಎಲ್ಲಾ ಲಸಿಕೆ ಪಡೆದ ಭಾರತೀಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿದೆ ಎಂದು ಆರೋಪಿಸಿದ್ದಾರೆ,
ಆರೋಪಗಳಿಗೆ ಪುಷ್ಟಿ ನೀಡುವಂತೆ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ,ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್ ಮತ್ತು ಕೆಸಿ ವೇಣುಗೋಪಾಲ್ ಹೀಗೆ ಹಲವರ ಮಾಹಿತಿಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿದ್ದಾರೆ
ಕೋವಿಡ್-19 ಲಸಿಕೆಯನ್ನು ಪಡೆದ ಪ್ರತಿಯೊಬ್ಬ ಭಾರತೀಯನ ವೈಯಕ್ತಿಕ ವಿವರಗಳು ಈ ಸೋರಿಕೆಯಾದ ಡೇಟಾಬೇಸ್ನಲ್ಲಿ ಉಚಿತವಾಗಿ ಲಭ್ಯವಿದೆ" ಎಂದು ಅವರು ಹೇಳಿದರು.