ಬೆಂಗಳೂರು, ಜೂ 12 (DaijiworldNews/SM): ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ದೊರಕಿದೆ. ಮಹಿಳೆಯರು ಖುಷಿಯಿಂದಲೇ ಪ್ರಯಾಣ ನಡೆಸುತ್ತಿದ್ದಾರೆ. ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸುವುದು ಕಡ್ಡಾಯವಾಗಿದ್ದು, ಝರಾಕ್ಸ್ ಪ್ರತಿ ಇದ್ದರು ಸಾಕಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಹಲವೆಡೆ ಐಡಿ ಪ್ರೂಫ್ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿಗಳು ನಡೆದಿದ್ದವು. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಸೋಮವಾರ ಸ್ಪಷ್ಟಪಡಿಸಿದೆ.
ಗುರುತಿನ ಚೀಟಿಗೆ ಸಂಬಂಧಿಸಿದಂತೆ ಇಂದು ತಿದ್ದುಪಡಿ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿಯ ಝರಾಕ್ಸ್ ಪ್ರತಿ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.