ಹಾಸನ, ಜೂ13 (DaijiworldNews/HR): ಕಾಂಗ್ರೆಸ್ ಸರ್ಕಾರವು ಹೇಳಿಕೊಂಡಿರುವ ಗ್ಯಾರಂಟಿಗಳನ್ನು ಈಡೇರಿಸುವ ಭರದಲ್ಲಿ ಜನರಿಗೆ ಹೊರೆ, ಇನ್ನೊಂದೆಡೆ ಬರೆ ಹಾಕುವ ಕೆಲಸ ಆಗಬಾರದು ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬಂದಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ, ಇದು ಬಿಜೆಪಿಗೆ ಹೊಸದೇನಲ್ಲ. ಜನರ ತೀರ್ಪನ್ನು ಒಪ್ಪಿ ವಿರೋಧ ಪಕ್ಷದಲ್ಲಿ ಕುಳಿತು ಯಶಸ್ವಿಯಾಗಿ ಕೆಲಸ ಮಾಡುತ್ತೇವೆ ಎಂದರು.
ಇನ್ನು ಸಂಘ ಸಂಸ್ಥೆಗಳಿಗೆ ನೀಡಿರುವ ಭೂಮಿಯನ್ನು ಮರು ಪರಿಶೀಲನೆ ಮಾಡುತ್ತೇವೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ. ನಮ್ಮ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಜನಸಾಮಾನ್ಯರಿಗೆ ಒಳ್ಳೆಯದಾಗುವ ಕೆಲಸ ಮಾಡಬೇಕು ಎಂದಿದ್ದಾರೆ.