ಬೆಂಗಳೂರು, ಜೂ 13 (DaijiworldNews/MS):ʻನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಜತೆಗೆ ಈ ಸ್ಥಿತಿಯಲ್ಲಿ ಅದನ್ನು ಬಯಸೋಕು ಹೋಗ್ತಿಲ್ಲʼ ಎಂದು ಮಾಜಿ ಸಿಎಂ ಬೊಮ್ಮಾಯಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿ, ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತದೆ. ಪ್ರತಿ ಸಲವೂ ನಡೆಯುವ ಸಂಪ್ರದಾಯ ಇದಾಗಿದೆ. ಇನ್ನು ಸೋಲಿನ ನೈತಿಕ ಹೊಣೆಯನ್ನು ನಾನು ಈಗಾಗಲೇ ಒಪ್ಪಿಕೊಂಡಿದ್ದೇನೆ. ಹೀಗಿರುವಾಗ, ಚುನಾವಣೆ ಸೋಲಿಗೆ ರಾಷ್ಟ್ರೀಯ ನಾಯಕರು ಬೇಸರಗೊಳ್ಳುವ ಪ್ರಶ್ನೆಯೇ ಬರುವುದಿಲ್ಲʼ ಎಂದಿದ್ದಾರೆ.
ಲೋಕಸಭೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಕುರಿತು ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಎಂದು ಅವರೇ ಹೇಳಿಕೊಂಡ ಕಾರಣ ಮತ್ತೆ ಬಿಜೆಪಿಗೆ ಬರೋ ಪ್ರಶ್ನೆ ಬರಲ್ಲ" ಎಂದಿದ್ದಾರೆ