ಮೈಸೂರು, ಜೂ 13 (DaijiworldNews/MS): ದೇಶದಲ್ಲಿ ಮುಂಗಾರು ತಡವಾಗಿದ್ದರೂ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾತನಾಡಿ, ಮಾನ್ಸೂನ್ ತಡವಾದರೂ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಬಿ, ಖಾರಿಫ್ ಬೆಳೆಗೆ ಸಂಬಂಧಿಸಿದಂತೆ ಕೇಂದ್ರದ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಭೆ ನಡೆಸಲಾಗಿದೆ. ಯಾವ ರಾಜ್ಯಕ್ಕೆ ಯಾವ ಬಿತ್ತನೆ ಬೀಜ, ರಸಗೊಬ್ಬರ ಬೇಕು ಎಂಬ ಮಾಹಿತಿ ಪಡೆದು ಅದನ್ನು ಪೂರೈಸುವ ಕೆಲಸ ಮಾಡುತ್ತಿದೆ. ರಾಜ್ಯಕ್ಕೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗಿದೆ ಎಂದು ತಿಳಿಸಿದ್ದಾರೆ
ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಿದ್ದು, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಹಣಕಾಸು ಸಚಿವರು, ಮುಖ್ಯಮಂತ್ರಿಗಳೂ ಆದ ಸಿದ್ದರಾಮಯ್ಯ ಅವರು ಹಣವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.