ನವದೆಹಲಿ, ಜೂ 15 (DaijiworldNews/MS): 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದ್ದು,ಎರಡು ಅವಧಿಗೆ ರಾಜ್ಯಸಭೆ ಸದಸ್ಯರಾಗಿದ್ದ ಕೇಂದ್ರ ಸಚಿವರಿಗೆ ಈ ಬಾರಿ ಲೋಕಸಭೆಗೆ ಟಿಕೆಟ್ ನೀಡಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ.
ಸಚಿವರಾದ ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್ ಮತ್ತು ಮನಸುಖ ಮಾಂಡವಿಯ ಅವರಿಗೆ ಸ್ಪರ್ಧೆಗೆ ತಯಾರಾಗಿರುವಂತೆ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಜತೆಗೆ ಹಾಲಿ ರಾಜ್ಯಸಭಾ ಸದಸ್ಯರಾದ ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂದಿಯಾ ಕೂಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಗುಜರಾತ್ನಿಂದ ಆಯ್ಕೆಯಾದ ಎಸ್. ಜೈಶಂಕರ್ ಅವರನ್ನು ಕೂಡ ಲೋಕಸಭೆಗೆ ಸ್ಪರ್ಧಿಸುವಂತೆ ಮನವೊಲಿಸುವ ಸಾಧ್ಯತೆಯಿದೆ.