ಮಣಿಪುರ, ಜೂ 15 (DaijiworldNews/MS): ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿ.ದೆ. ಇಂಫಾಲ್ ನಲ್ಲಿ ಕೇಂದ್ರ ಸಚಿವರ ನಿವಾಸಕ್ಕೆ ಗಲಭೆಕೋರರು ಬೆಂಕಿ ಹಚ್ಚಿದ್ದಾರೆ.
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್.ಕೆ.ರಂಜನ್ ಸಿಂಗ್ ಅವರ ನಿವಾಸಕ್ಕೆ ಗುರುವಾರ ತಡರಾತ್ರಿ ಗುಂಪೊಂದು ಬೆಂಕಿ ಹಚ್ಚಿದ್ದು ಘಟನೆ ವೇಳೆ ಸಚಿವರು ಮನೆಯಲ್ಲಿ ಇರಲಿಲ್ಲ.
ನಿನ್ನೆಯಷ್ಟೇಮಣಿಪುರದ ಏಕೈಕ ಮಹಿಳಾ ಸಚಿವೆ ನೆಮ್ಚಾ ಕಿಪ್ಗೆನ್ ಅವರ ಅಧಿಕೃತ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು.
ಬೆಂಕಿಯಿಂದಾಗಿ ಸಚಿವರ ನಿವಾಸದ ಕೆಲ ಕೊಠಡಿಗಳು ಬೆಂಕಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.