ಬೆಂಗಳೂರು, ಜೂ 17 (DaijiworldNews/HR): 10 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತೇವೆಂದು ಕರ್ನಾಟಕ ಸರ್ಕಾರ ಹೇಳಿದ್ದು, ಈಗಾಗಲೇ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಹಾಗಾದರೆ ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಅಕ್ಕಿ ಕೊಡಲಾಗದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಕುಣಿಯಲಾಗದವನು ನೆಲಡೊಂಕು ಅಂದಂತಾಗಿದೆ ರಾಜ್ಯದ ಸ್ಥಿತಿ. ಜನರನ್ನು ರಾಜ್ಯ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದರು.
ಇನ್ನು ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಎಫ್ಸಿಐಗೆ ಪತ್ರ ಬರೆಯುವ ಮೊದಲೇ ಮಾರಾಟ ಯೋಜನೆಯ ನಿಯಮಗಳಲ್ಲಿ ಬದಲಾವಣೆ ತರಲಾಗಿತ್ತು ಎಂದು ಹೇಳಿದ್ದಾರೆ.