ಬೆಂಗಳೂರು, ಜೂ 19 (DaijiworldNews/MS): ಬೆಂಗಳೂರು-ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಸೋಮವಾರ ಮುಂಜಾನೆ ಆರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಜೂನ್ 26ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ.
ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿದ್ದು,12.40ಕ್ಕೆ ಧಾರಾವಾಡಕ್ಕೆ ತಲುಪಲಿದೆ.
ಮಧ್ಯಾಹ್ನ 1.15 ಕ್ಕೆ ಧಾರಾವಾಡದಿಂದ ಹೊರಟು ರಾತ್ರಿ 8.10ಕ್ಕೆ ಬೆಂಗಳೂರಿನ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಲಿದೆ.
ಬೆಂಗಳೂರು–ಧಾರವಾಡದ ಅಂತರ 487 ಕಿಲೋಮೀಟರ್ ಇದ್ದು, ಸುಮಾರು ಏಳು ಗಂಟೆಗಳಲ್ಲಿ ಕ್ರಮಿಸಲಿದೆ.