ಬೆಂಗಳೂರು, ಜೂ 21 (DaijiworldNews/MS): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಲಗಳ ಪ್ರಕಾರ, ಸಿಎಂ ಪತ್ನಿ ಪಾರ್ವತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲ ದಿನಗಳಿಂದ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಸಿಎಂ ಇಂದು ದೆಹಲಿ ಪ್ರವಾಸ ಕೈಗೊಳ್ಳಬೇಕಿದ್ದು, ಶೆಡ್ಯೂಲ್ ಬದಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ