ಬೆಂಗಳೂರು, ಜೂ 28 (DaijiworldNews/MS): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಿದೆ.
ಗೃಹಲಕ್ಷ್ಮಿ ಸೇರಿದಂತೆ ಅನುಷ್ಠಾನಕ್ಕೆ ಬಾಕಿ ಉಳಿದಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಜತೆಗೆ, ಅನ್ನಭಾಗ್ಯದ ಅಕ್ಕಿ ಖರೀದಿಗೆ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ ಬಿಜೆಪಿ ಸರ್ಕಾರದ ಅಕ್ರಮಗಳ ತನಿಖೆ, ಮಳೆ ಕೊರತೆಗೆ ಪರಿಹಾರ, ಮೈಸೂರು ದಶಪಥ ರಸ್ತೆ ತಾಂತ್ರಿಕ ಸಮಸ್ಯೆ ಪರಿಶೀಲನೆಗೆ ಸಮಿತಿ ರಚಿಸುವ ಬಗ್ಗೆಯೂ ತೀರ್ಮಾನಗಳಾಗುವ ನಿರೀಕ್ಷೆಯಿದೆ.
ಹಿಂದಿನ ಸರ್ಕಾರದ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ. ಅವುಗಳಲ್ಲಿ ಪ್ರಮುಖವಾದ ಬಿಟ್ ಕಾಯಿನ್ ಪ್ರಕರಣದ ತನಿಖೆಗೆ ಎಸ್ ಐಟಿ ರಚನೆಗೆ ತೀರ್ಮಾನ ಸಾಧ್ಯತೆ ಇದೆ ಎನ್ನಲಾಗಿದೆ.