ಬೆಂಗಳೂರು, ಜೂ 28 (DaijiworldNews/MS): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿ ಅನಿಮೇಟೆಡ್ ವಿಡಿಯೋ ಟ್ವೀಟ್ ಮಾಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.
ವರದಿಗಳ ಪ್ರಕಾರ, ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಸಚಿವ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದ ಬಳಿಕ ಪೊಲೀಸರು ಮಾಳವಿಯಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 120b, 505(2), 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೂನ್ 17ರಂದು ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವೀಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಈ ದೂರು ದಾಖಲಾಗಿತ್ತು.