ಬೆಂಗಳೂರು, ಜೂ 29 (DaijiworldNews/HR): ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಸಚಿವ ರೇಣುಕಾಚಾರ್ಯ ಅವರಿಗೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ.
ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಪಕ್ಷ ವಿರೋಧಿ ಹೇಳಿಕೆಗಳ ಕುರಿತು ಮಾಜಿ ಸಚಿವ ರೇಣುಕಾಚಾರ್ಯರಿಗೆ ನೋಟಿಸ್ ನೀಡಿದ್ದು, ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ.
ಇನ್ನು ಪಕ್ಷ ವಿರೋಧಿ ಹೇಳಿಕೆಗಳ ವಿಷಯಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯರಿಗೆ ಪಕ್ಷವು ಅನೇಕ ಬಾರಿ ತಿಳಿ ಹೇಳಿದ್ದರೂ ಕೂಡ ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದು, ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸನ್ನು ನೀಡಲಾಗಿದೆ.