ಬೆಂಗಳೂರು, ಜೂ 30 (DaijiworldNews/HR): ಆ್ಯಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿನೆ ನೀಡಿದ್ದಾರೆ.
ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿದ್ದರಾಮಯ್ಯ ಅವರು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದ್ದಾರೆ.
ಇನ್ನು 2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದು, ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದು, ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ.