ಬೆಂಗಳೂರು, ಏ 02 (MSP): ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಶುಭ ಕೋರಿದ್ದಾರೆ.
![](https://daijiworld.ap-south-1.linodeobjects.com/iWeb/tvdaijiworld/img_tv247/msp-020419-tej.jpg)
ಅನಂತ್ ಕುಮಾರ್ ಅವರ ನಿಧನದ ಬಳಿಕ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಟಿಕೆಟ್ ಅನ್ನು ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ನೀಡಲಾಗುವುದು ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಟಿಕೆಟ್ ಅವರ ಕೈ ತೇಜಸ್ವಿ ಸೂರ್ಯ ಅವರ ಪಾಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳಾ ನಡುವೆ ಹೈಕಮಾಂಡ್ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಿದೆ.