ಚಿಕ್ಕಬಳ್ಳಾಪುರ, ಜೂ 03 (DaijiworldNews/HR): ವಸತಿ ಯೋಜನೆ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಸುಳ್ಳು ಅಭಿಯಾನ ಆರಂಭಿಸಿದ್ದು, ಅವರಿಗೆ ಸುಳ್ಳೆ ಮನೆ ದೇವರಾಗಿದೆ ಎಂದು ಮಾಜಿ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಿವೇಶನಗಳು ಆಗೇ ಇಲ್ಲ ಎನ್ನುವ ಹಾಗೆ ಬಡವರ ಆಸೆಗೆ ತಣ್ಣೀರು ಎರಚುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಸುಳ್ಳಿನ ಯೋಜನೆ ತಂದಿಲ್ಲ. ಕಣ್ಣಿಗೆ ಕಂಡಿರುವ ಯೋಜನೆ ತಂದಿದ್ದೇನೆ ಎಂದರು.
ಇನ್ನು ಕರ್ನಾಟಕದಲ್ಲೇ 20,000ಕ್ಕೂ ಹೆಚ್ಚು ನಿವೇಶನ ತಂದ ಏಕೈಕ ವ್ಯಕ್ತಿ ನಾನು. ಇದನ್ನು ಮೊದಲಿಗೆ ಶಾಸಕ ಪ್ರದೀಪ್ ಈಶ್ವರ್ ತಿಳಿದುಕೊಳ್ಳಲಿ ಎಂದಿದ್ದಾರೆ.
ಎಲ್ಲ ಆದೇಶ ಪತ್ರಗಳಿವೆ. 555 ಎಕರೆ ಜಮೀನು ಮಂಜೂರಾತಿ ಆಗಿದ್ದು, ನಾನೇ ಖುದ್ದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಫಲಾನುಭವಿಗಳ ಆಯ್ಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.