ಬೆಂಗಳೂರು, ಜು 4 (DaijiworldNews/MS): ನಿನ್ನೆಯಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಸದನದಲ್ಲಿ ಸರ್ಕಾರದಲ್ಲಿ ಐದು ಗ್ಯಾರಂಟಿ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಧರಣಿ ಏಕಕಾಲದಲ್ಲಿ ನಡೆಸಲಿದೆ.
‘ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ’ ಶೀರ್ಷಿಕೆಯಡಿಯಲ್ಲಿ, ವಿಧಾನಸಭೆಯಲ್ಲಿ ಒಳಗೆ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಮುಂದಾಗಿದ್ದರೆ, ಪರಿಷತ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಇನ್ನು ಸದನ ಹೊರಗೆ ಫ್ರೀಡಂಪಾರ್ಕ್ನಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ನಳಿನ್ ಕುಮಾರ್ ಕಟೀಲ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಒಟ್ಟಾರೆ ಸರ್ಕಾರದ 5 ಗ್ಯಾರಂಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಮೂಲಕ ಸರ್ಕಾರದ ಮೇಲೆ ಒತ್ತಡ ತಂತ್ರಕ್ಕೆ ಬಿಜೆಪಿ ಮುಂದಾಗಿದೆ.