ಬೆಂಗಳೂರು, ಜು 8 (DaijiworldNews/MS): ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್ನಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದಾರೆ.
ಪ್ರಮುಖವಾಗಿ ಬಜೆಟ್ನಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎನ್ಇಪಿ, ವಿದ್ಯಾನಿಧಿ, ಜಿಲ್ಲೆಗೊಂದು ಗೋಶಾಲೆ ಸೇರಿದಂತೆ 17ಕ್ಕೂ ಹೆಚ್ಚು ಯೋಜನೆಗಳನ್ನು ಕೈಬಿಡಲಾಗಿದೆ.
ಅದಲ್ಲದೇ ಬಿಎಸ್ ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆಗೂ ಕೂಡ ಸಿದ್ದರಾಮಯ್ಯ ಅವರು ಅನುದಾನದ ಹಂಚಿಕೆ ಮಾಡಿಲ್ಲ.
ಎನ್ಇಪಿ ಬದಲಿಗೆ ಈ ಮೊದಲು ಇದ್ದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಪ್ರಸ್ತಾಪ ಮಾಡಿದ್ದಾರೆ. ರೈತರ, ಮೀನುಗಾರರ, ಟಾಕ್ಸಿ ಚಾಲಕರು ಸೇರಿದಂತೆ ಇತರೆ ವರ್ಗದ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುತ್ತಿದ್ದ ವಿದ್ಯಾನಿಧಿ ಯೋಜನೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ಐದು ಲಕ್ಷ ರೂ. ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಯೂ ರದ್ದುಗೊಂಡಿದೆ.