ಬೆಂಗಳೂರು, ಜು 11 (DaijiworldNews/HR): ಪ್ರಾಥಮಿಕ ಶಾಲಾ ಹಂತದಲ್ಲಿ ಎನ್ಇಪಿ ಜಾರಿಗೊಳಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಎನ್ಇಪಿ ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಅದರಂತೆ ಎನ್ಇಪಿ ರದ್ದು ಮಾಡುತ್ತೇವೆ. ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎನ್ಇಪಿ ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ ಎಂದಿದ್ದಾರೆ.
ಇನ್ನು ಎನ್ಇಪಿ ಬದಲಾಗಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ.ನಾವು ಮತ್ತು ಉನ್ನತ ಶಿಕ್ಷಣ ಇಲಾಖೆ ಸಚಿವರು ಇಬ್ಬರು ಚರ್ಚೆ ಮಾಡಿ ಎನ್ಇಪಿ ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.