ಬೆಂಗಳೂರು,ಜು 12 (DaijiworldNews/AK) ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ಯಾವ ರಾಜಕಾರಣಿ ಅಥವಾ ಮಂತ್ರಿಗಳ ಜೊತೆಯೂ ನಮ್ಮಅಡ್ಜಸ್ಟ್ಮೆಂಟ್ ರಾಜಕೀಯ ಇಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾವು ಎಲ್ಲಾ ಬಿಜೆಪಿ ಶಾಸಕರು ಸದನದಲ್ಲಿ ಸಮರ್ಥವಾಗಿ ವಿರೋಧ ಪಕ್ಷವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹಾಗೂ ಸರ್ಕಾರದ ವೈಫಲ್ಯದ ಕುರಿತು ನಮ್ಮ ಎಲ್ಲಾ ಶಾಸಕ ಮಿತ್ರರು ಸಮರ್ಥವಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಾಗೂ ಆಯವ್ಯಯದ ಕುರಿತು ಚರ್ಚೆಗಳು ಬಾಕಿ ಇದೆ ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.
ವಿಜಯಪುರ ಪಾಲಿಕೆಗೆ ಹೊಸ ಆಯುಕ್ತರ ವರ್ಗಾವಣೆ ವಿಚಾರ ಪ್ರಸ್ತಾಪಿಸಿ ಅರ್ಹತೆಯಿಲ್ಲದ, ಐಎಎಸ್, ಕೆಎಎಸ್ ಕೇಡರ್ ಅಲ್ಲದ ಅಧಿಕಾರಿಯನ್ನು ವರ್ಗಾಯಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಸರಕಾರದ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದರು. ಆ ಅಧಿಕಾರಿ ಸೌಜನ್ಯಕ್ಕೂ ನನ್ನ ಬಂದು ಮಾತಾಡಿಸಿಲ್ಲ. ಈ ವರ್ಗಾವಣೆ ಮೂಲಕ ಸಚಿವರು ವ್ಯಾಪಾರ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಸಚಿವ ಬೈರತಿ ಸುರೇಶ್ ಸೇರಿದಂತೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಸಹ ಯತ್ನಾಳ್ ಹೇಳಿಕೆ ತ್ರೀವವಾಗಿ ಖಂಡನೆ ವ್ಯಕ್ತಪಡಿಸಿದರು.