ನವದೆಹಲಿ, ಜು 13 (DaijiworldNews/HR): ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಯಮುನಾ ನದಿಯಲ್ಲಿ ನೀರಿನ ಮಟ್ಟವು ಮತ್ತಷ್ಟು ಏರಿಕೆಯಾಗಿದ್ದು, ತಗ್ಗು ಪ್ರದೇಶದಲ್ಲಿರುವ ಮನೆಗಳು ಮತ್ತು ರಸ್ತೆಗಳನ್ನು ಜಲಾವೃತಗೊಂಡಿದ್ದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹದ ನೀರು ಬಂದಿದೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ 7 ಗಂಟೆಗೆ ಯಮುನಾ ನದಿಯಲ್ಲಿ ನೀರಿನ ಮಟ್ಟ 208.46 ಮೀಟರ್ ಆಗಿದ್ದು, ಪ್ರಸ್ತುತ ನೀರಿನ ಮಟ್ಟ ಅಪಾಯದ ಮಟ್ಟಕ್ಕಿಂತ ಮೂರು ಮೀಟರ್ಗಳಷ್ಟು ಹೆಚ್ಚಿಗೆಯಾದೆ.
ಇನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಮಧ್ಯ ಪ್ರವೇಶಿಸಿ ಬ್ಯಾರೇಜ್ನಿಂದ ನೀರು ಬಿಡುವುದನ್ನು ನಿಲ್ಲಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ , ಆದರೆ ಬ್ಯಾರೇಜ್ನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡದೆ ಬೇರೆ ವಿಧಿಯಿಲ್ಲ ಎಂದು ಕೇಂದ್ರ ಹೇಳಿದೆ.