ಪುಣೆ, ಜು 15 (DaijiworldNews/HR): ಮರಾಠಿ ಸಿನಿಮಾರಂಗದ ಹಿರಿಯ ನಟ-ನಿರ್ದೇಶಕ ರವೀಂದ್ರ ಮಹಾಜನಿ (77) ಅವರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಜು.14 ರಂದು ಪುಣೆ ನಗರದ ಸಮೀಪದ ತಾಲೆಗಾಂವ್ ದಭಾಡೆ ಪ್ರದೇಶದಲ್ಲಿರುವ ಫ್ಲ್ಯಾಟ್ ವೊಂದರಲ್ಲಿ ರವೀಂದ್ರ ಮಹಾಜನಿ ಅವರ ಮೃತದೇಹ ಪತ್ತೆಯಾಗಿದ್ದು, ಮೂರು ದಿನಗಳ ಹಿಂದೆಯೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಕುರಿತು ತಾಳೆಗಾಂವ್ ದಭಾಡೆ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ರವೀಂದ್ರ ಮಹಾಜನಿ ಅವರು ಕಳೆದ ಎಂಟು ತಿಂಗಳಿನಿಂದ ಒಂಟಿಯಾಗಿ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದು, ಅವರ ನಮಗೆ ನೆರೆಹೊರೆಯವರಿಂದ ಕರೆಬಂತು. ಅವರ ನಿವಾಸದಿಂದ ದುರ್ವಾಸನೆ ಬರುತ್ತಿರುವುದರಿಂದ ಅಲ್ಲಿನ ಸ್ಥಳೀಯರು ನಮಗೆ ಮಾಹಿತಿ ನೀಡಿದ್ದಾರೆ. ನಾವು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ರವೀಂದ್ರ ಮಹಾಜನಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.