ಬೆಂಗಳೂರು,ಜು 16 (DaijiworldNews/MS): ಕಾಂಗ್ರೆಸ್ ನವರು ಬಳೆ ತೊಟ್ಟುಕೊಳ್ಳವರೇ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ "ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ" ಎಂದು ತಿರುಗೇಟು ನೀಡಿದೆ.
ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಬಳೆ ತೊಡಬಾರದು ಎಂದು ರಾಹ್ಯ ಸರ್ಕಾರ ಗೈಡ್ ಲೈನ್ಸ್ ವಿರುದ್ದ ಕಿಡಿಕಾರಿದ್ದ ನಳಿನ್, ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ.ʼಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಎಂಬುದೇ ತಿಳಿಯುತ್ತಿಲ್ಲ.ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ ಎಂದು ಟ್ವೀಟಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಘಟಕ, ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ.ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೆ ಆದೇಶ ಹೊರಡಿಸಿದೆ. ನಳಿನ್ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ ಎಂದು ವ್ಯಂಗ್ಯವಾಡಿದೆ.