ಬೆಂಗಳೂರು, ಜು 16 (DaijiworldNews/HR): ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದಿದ್ದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಹೇಳಿದ್ದೇನೆ ಎಂದರು.
ಇನ್ನು ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುತ್ತೇನೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ತಿಳಿಸುತ್ತೇನೆ ಎಂದಿದ್ದಾರೆ.