ಬೆಂಗಳೂರು, ಜು 17 (DaijiworldNews/HR): ಎನ್ಡಿಎ ಸಭೆಗೆ ಆಹ್ವಾನ ಬಂದರೆ ನಾನು ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎನ್ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ನನಗೆ ಆಹ್ವಾನ ಬಂದಿಲ್ಲ. ಯುಪಿಎ ಸಭೆಗೆ ಆಹ್ವಾನ ಬಂದರೂ ನಾವು ಹೋಗುವುದಿಲ್ಲ. ಆದರೆ ಎನ್ಡಿಎ ಸಭೆಗೆ ಆಹ್ವಾನ ಬಂದರೆ ಹೋಗಿ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದರು.
ಇನ್ನು ಬಿಜೆಪಿ ಜೊತೆ ಕುಮಾರಸ್ವಾಮಿ ದೋಸ್ತಿ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ, ವಿರೋಧ ಪಕ್ಷದ ಸ್ಥಾನ ನೀಡಬಹುದು ಎಂಬ ಚರ್ಚೆಗೆ ಉತ್ತರಿಸಿದ ಅವರು, ನನಗೆ ಕೇಂದ್ರ ಸಚಿವ ಸ್ಥಾನ ಅಥವಾ ವಿಪಕ್ಷ ಸ್ಥಾನದ ಅವಶ್ಯಕತೆ ಇಲ್ಲ. ಅದರ ಚರ್ಚೆಯೂ ಮಾಡಲ್ಲ. ಬಿಜೆಪಿಯಲ್ಲಿ ಸಮರ್ಥರು ಇದ್ದಾರೆ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಎಂದು ಕೇಂದ್ರದ ನಾಯಕರಿಗೆ ಹೇಳುತ್ತೇನೆ ಎಂದಿದ್ದಾರೆ.