ಶ್ರೀನಗರ, ಜು 18 (DaijiworldNews/HR): ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿರುವ ಘಟನೆ ಪೂಂಚ್ನ ಸಿಂಧ್ರಾ ಪ್ರದೇಶದಲ್ಲಿ ನಡೆದಿದೆ.
ಸೋಮವಾರ ತಡರಾತ್ರಿ 11:30ರ ಸುಮಾರಿಗೆ ಭದ್ರತಾ ಪಡೆಗಳ ನಡುವೆ ಮೊದಲ ಸುತ್ತಿನ ಎನ್ಕೌಂಟರ್ ನಡೆದಿದ್ದು, ನಂತರ ಈ ಭಾಗದಲ್ಲಿ ಡ್ರೋನ್ ಕಣ್ಗಾವಲು ಇರಿಸಲಾಗಿತ್ತು ಎನ್ನಲಾಗಿದೆ.
ಇನ್ನು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು.