ರಾಮನಗರ, ಜು 18 (DaijiworldNews/HR): ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಮ್ಮೇಳಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದ್ದು, ಇದು ಸರಿಯಲ್ಲ, ಅಧಿಕಾರಿಗಳು ಜನರ ಕೆಲಸ ಮಾತ್ರ ಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಕೂಡ ರಾಜಕೀಯವನ್ನೇ ಮಾಡುತ್ತಿದ್ದಾರೆ. ಅದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಮಾಡುತ್ತಿದ್ದಾರಾ? ಅವರ ರಾಜಕೀಯ ಸಂಘಟನೆಗೆ ಹಿರಿಯ ಅಧಿಕಾರಿಗಳನ್ನ ಬಳಿಸಿಕೊಂಡಿದ್ದಾರೆ. 40 ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ಅತಿಥಿಗಳನ್ನು ಸ್ವಾಗತ ಕೋರಲು ಬಳಸಿಕೊಂಡು ಕೆಟ್ಟ ಸಂಪ್ರದಾಯ ಹುಟ್ಟಾಕಿದ್ದಾರೆ ಎಂದರು.
ಇನ್ನು ರಾಜಕೀಯ ಕಾರ್ಯಕ್ರಮಕ್ಕೆ ರಾಜ್ಯದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿಯಲ್ಲ, ಅಧಿಕಾರಿಗಳು ಜನರ ಕೆಲಸ ಮಾತ್ರ ಬೇಕು. ಅಧಿಕಾರಿಗಳನ್ನು ಪಕ್ಷದ ಕಾರ್ಯಕರ್ತರ ರೀತಿ ಬಳಕೆ ಮಾಡಿಕೊಂಡಿರುವುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದಿದ್ದಾರೆ.