ನವದೆಹಲಿ,ಜು 18 (DaijiworldNews/AK):ಮೋದಿ ಉಪನಾಮ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ಗುಜರಾತ್ನ ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆ ತಡೆ ಹಿಡಿಯುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ರಾಹುಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ನಿ ಅವರು ಜುಲೈ 21 ಅಥವಾ ಜುಲೈ22 ರಂದು ಅರ್ಜಿಯನ್ನು ವಿಚಾರಣೆ ಪಟ್ಟಿ ಮಾಡಬೇಕೆಂದು ಕೋರಿದ್ದರು. ಮನವಿ ಅಲಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಅವರನ್ನೊಳಗೊಂಡ ಪೀಠವು ಇದೇ ಜುಲೈ 21 ರಂದು ಮೇಲ್ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಮೋದಿ ಉಪನಾಮದ ಕುರಿತು ಕಾಮೆಂಟ್ ಮಾಡಿದ್ದಕ್ಕಾಗಿ ಗುಜರಾತ್ನ ಸೂರತ್ ನ್ಯಾಯಾಲಯವು ಮಾನನಷ್ಟ ಆರೋಪದಲ್ಲಿ ರಾಹುಲ್ ಗಾಂಧಿಯನ್ನು ತಪ್ಪಿತಸ್ಥರೆಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.