ಹಾವೇರಿ, ಜು 19 (DaijiworldNews/HR): ಯುವ ರೈತರನ್ನು ಮದುವೆಯಾಗಲು ಕನ್ಯೆಯರು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತಿರುವ ಯುವಕರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಇನ್ನು ನಮಗೆ 5 ರಿಂದ 6 ಎಕರೆ ಜಮೀನು ಕೂಡ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕೃಷಿ ಮಾಡುತ್ತಿರುವವನು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಸ್ಥಿತಿ ನಿರ್ಮಾಣವಾಗಿದ್ದು, ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು ಎಂದು ಆಗ್ರಹಿಸಿದ್ದಾರೆ.