ನವದೆಹಲಿ, ಜು 19 (DaijiworldNews/HR): ಬಿಜೆಪಿ ವಿರುದ್ಧದ ವಿರೋಧ ಪಕ್ಷಗಳ ಒಕ್ಕೂಟಕ್ಕೆ INDIA ಎಂಬ ಹೆಸರು ನಾಮಕರಣ ಮಾಡಿರುವುದಕ್ಕೆ ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ನಡೆದ ಮಹಾಮೈತ್ರಿಕೂಟದ ಸಭೆಯಲ್ಲಿ ಕಾಂಗ್ರೆಸ್ ಪಕ್ಷವು 'INDIA' ಎಂಬ ಹೆಸರು ಘೋಷಣೆ ಮಾಡಿತ್ತು. ಘೋಷಣೆ ಬೆನ್ನಲ್ಲೇ ಸಭೆಯಲ್ಲಿ ನಿತೀಶ್ ಕುಮಾರ್ ಅವರು, INDIA ಎಂದು ಹೆಸರಿಡಲು ಹೇಗೆ ಸಾಧ್ಯ? ಈ ಬಗ್ಗೆ ಚರ್ಚೆ ಮಾಡದೇ ಹೆಸರು ಅಂತಿಮಗೊಳಿಸಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇನ್ನು ವಿರೋಧ ಪಕ್ಷಗಳ ಒಕ್ಕೂಟಕ್ಕೆ INDIA ಎಂದು ಹೆಸರಿಡಲು ರಾಹುಲ್ ಗಾಂಧಿ ಸೂಚಿಸಿದ್ದು, ಕಾಂಗ್ರೆಸ್ ನಾಯಕರು ಈ ಹೆಸರನ್ನು ಅಂತಿಮಗೊಳಿಸಿದ್ದಾರೆ. ಆದರೆ ಇದಕ್ಕೆ ನಿತೀಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಮ್ದು ವರದಿಯಾಗಿದೆ.