ಮಣಿಪುರ, ಜು 20 (DaijiworldNews/MS): ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.
ಮೇ 4 ರಂದು ಈ ಘಟನೆ ನಡೆದಿದ್ದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್ಎಫ್) ಗುಂಪಿನ ಮೆರವಣಿಗೆಯ ಒಂದು ದಿನದ ಮುಂಚಿತವಾಗಿ ಈ ವಿಡಿಯೋ ಬಿಡುಗಡೆ ಮಾಡಲಾಗಿದೆ.
ವಿಡಿಯೋದಲ್ಲಿ ದುಷ್ಕರ್ಮಿಗಳ ಗುಂಪು ಅವರನ್ನು ಹಿಂಸಿಸುತ್ತಿರುವುದು ಮತ್ತು ಮಹಿಳೆಯರು ನಿರಂತರ ಸಹಾಯಕ್ಕಾಗಿ ಅಂಗಲಾಚುವುದು ದಾಖಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಐಟಿಎಲ್ಎಫ್ ಮನವಿ ಮಾಡಿದೆ. ಘಟನೆಯನ್ನು ದೃಢಿಕರಿಸಿರುವ ಪೊಲೀಸರು ಬುಧವಾರ ಸಂಜೆ ಹೇಳಿಕೆ ಬಿಡುಗಡೆ ಮಾಡಿದ್ದು, ದುಷ್ಕರ್ಮಿಗಳ ಬಂಧನಕ್ಕಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿರುವುದಾಗಿ ಹೇಳಿದೆ.