ಬೆಂಗಳೂರು, ಜು 21 (DaijiworldNews/MS): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರಿಂದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ
ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ಗಳನ್ನು ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಾಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.