ಬೆಂಗಳೂರು, ಜು 22(DaijiworldNews/AK):ಪಿಎಸ್ಐ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ಕಾಂಗ್ರೆಸ್ನ ದ್ವೇಷದ ರಾಜಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್ಐ ನೇಮಕಾತಿ ಹಗರಣವನ್ನು ನಾವೇ ಸಿಐಡಿ ತನಿಖೆಗೆ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ. ಈ ಹಗರಣದಲ್ಲಿ ಕಾಂಗ್ರೆಸ್ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೋರ್ಟ್ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.
ಇದೇ ವೇಳೆ ಬೆಲೆ ಏರಿಕೆ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ಕಷ್ಠಕರವಾಗಿದೆ. ಸರ್ಕಾರ ಬಂದ ತಕ್ಷಣ ವಿದ್ಯುತ್ ದರ , ತರಕಾರಿಗಳ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಇನ್ನು ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದು ಆಕೋಶ್ರ ವ್ಯಕ್ತಪಡಿಸಿದರು.