ನವದೆಹಲಿ, ಜು 23 (DaijiworldNews/AK):ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಿದ್ಧ. ಆದ್ರೆ, ಸೂಕ್ಷ್ಮ ವಿಷಯಗಳಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದು ಕೆಂದ್ರ ಸಚಿವ ಅನುರಾಗ್ ಠಾಕೂರ್ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಮಣಿಪುರ ಘಟನೆ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಸಿದ್ದನಿದ್ದೇನೆ. ಯಾರೂ ಪಲಾಯನ ಮಾಡಬಾರದು ಎಂದು ವಿಪಕ್ಷಗಳಿಗೆ ಅವರು ಮನವಿ ಮಾಡಿದರು.
ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದು ದೇಶವನ್ನೇ ತಲ್ಲಣಗೊಳಿಸಿದೆ. ಈ ಹೀನಾಯ ಕೃತ್ಯವನ್ನ ಯಾರೂ ಕ್ಷಮಿಸುವುದಕ್ಕೆ ಸಾಧ್ಯವಿಲ್ಲ. ಮಹಿಳೆಯರಿಗೆ ಮಾಡಿದ ಅಪಮಾನವನ್ನ ಸಹಿಸುವುದಕ್ಕೆ ಸಾಧ್ಯವಿಲ್ಲ. ಆದ್ರೆ, ಪೈಶಾಚಿಕ ಕೃತ್ಯದಲ್ಲಿ ರಾಜಕೀಯ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಲೋಕಸಭೆ ವಿಪಕ್ಷಗಳ ಗದ್ದಲ ಎಬ್ಬಿಸಿವೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕು ಎಂದರು.